2 ಪೂರ್ವಕಾಲ ವೃತ್ತಾಂತ 32:4 - ಪರಿಶುದ್ದ ಬೈಬಲ್4 ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಅನೇಕರು ಸೇರಿ - ಇಲ್ಲಿಗೆ ಬರುವ ಅಶ್ಶೂರದ ರಾಜರಿಗೆ ಬೇಕಾದಷ್ಟು ನೀರು ಯಾಕೆ ಸಿಕ್ಕಬೇಕು ಎಂದುಕೊಂಡು ಎಲ್ಲಾ ಬಾವಿಗಳನ್ನೂ ದೇಶಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು. ಅಧ್ಯಾಯವನ್ನು ನೋಡಿ |
ದಾವೀದ ನಗರದ ಕೋಟೆಗೋಡೆಗಳಲ್ಲಿ ಬಿರುಕುಗಳು ಉಂಟಾಗುವವು. ಆ ಬಿರುಕುಗಳನ್ನು ನೀವು ಸ್ಪಷ್ಟವಾಗಿ ಕಾಣಬಹುದು. ಅದರೊಳಗಿರುವ ಮನೆಗಳನ್ನು ಲೆಕ್ಕ ಮಾಡಬಹುದು. ಆ ಮನೆಗಳ ಕಲ್ಲುಗಳನ್ನು ತೆಗೆದು ಬಿರುಕು ಮುಚ್ಚಲಾಗುವದು. ಎರಡು ಸಾಲು ಕೋಟೆಗೋಡೆಗಳ ಮಧ್ಯದಲ್ಲಿ ಹಳೆಯ ಕಾಲುವೆಯ ಮೂಲಕ ನೀರನ್ನು ತರಿಸಿ ಆ ನೀರನ್ನು ಉಳಿತಾಯ ಮಾಡುವಿರಿ. ಇವೆಲ್ಲವನ್ನು ನೀವು ನಿಮ್ಮನ್ನು ಸಂರಕ್ಷಿಸಿಕೊಳ್ಳುವದಕ್ಕೋಸ್ಕರ ಮಾಡುವಿರಿ. ಆದರೆ ಇವೆಲ್ಲವನ್ನು ನಿರ್ಮಿಸಿದ ದೇವರ ಮೇಲೆ ನೀವು ನಂಬಿಕೆ ಇಡುವದಿಲ್ಲ. ಇದನ್ನು ಬಹಳ ಕಾಲದ ಹಿಂದೆ ನಿರ್ಮಿಸಿದ ದೇವರನ್ನು ನೀವು ನೋಡುವದಿಲ್ಲ.