Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:5 - ಪರಿಶುದ್ದ ಬೈಬಲ್‌

5 ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:5
18 ತಿಳಿವುಗಳ ಹೋಲಿಕೆ  

ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.


ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು.


ಆಗ ನೆಬೂಕದ್ನೆಚ್ಚರನ ಸೇನೆಯು ನಗರದ ಗೋಡೆಯಲ್ಲಿ ಒಂದು ರಂಧ್ರವನ್ನು ಕೊರೆದರು. ಅಂದಿನ ರಾತ್ರಿ ರಾಜನಾದ ಚಿದ್ಕೀಯ ಮತ್ತು ಅವನ ಸೈನಿಕರೆಲ್ಲರೂ ಓಡಿಹೋದರು. ಅವರು ರಾಜನ ತೋಟದ ಎರಡು ಗೋಡೆಗಳ ಮಧ್ಯಭಾಗದ ರಹಸ್ಯ ಬಾಗಿಲಿನ ಮೂಲಕ ಓಡಿಹೋದರು. ಬಾಬಿಲೋನ್ ಸೇನೆಯು ನಗರವನ್ನು ಸುತ್ತುವರಿದಿತ್ತು. ಆದರೆ ಚಿದ್ಕೀಯ ಮತ್ತು ಅವನ ಸೇನೆಯು ಮರುಭೂಮಿಯ ರಸ್ತೆಯಲ್ಲಿ ತಪ್ಪಿಸಿಕೊಂಡರು.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಯೆಹೂದದ ರಾಜನಾದ ಚಿದ್ಕೀಯನು ಬಾಬಿಲೋನಿನ ಆ ಅಧಿಕಾರಿಗಳನ್ನು ನೋಡಿದನು. ಅವನು ಮತ್ತು ಅವನ ಜೊತೆಗಿದ್ದ ಸೈನಿಕರು ಓಡಿಹೋದರು. ಅವರು ರಾತ್ರಿಯಲ್ಲಿ ಜೆರುಸಲೇಮ್ ನಗರವನ್ನು ಬಿಟ್ಟು ರಾಜನ ಉದ್ಯಾನದ ಮಾರ್ಗವಾಗಿ ಹೊರಗೆ ಹೋದರು. ಅವರು ಎರಡು ಗೋಡೆಗಳ ಮಧ್ಯದಲ್ಲಿದ್ದ ಬಾಗಿಲಿನಿಂದ ಹೊರಗೆ ಬಂದು ಮರುಭೂಮಿಯ ಕಡೆಗೆ ಹೊರಟರು.


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.


ಆರು ವರ್ಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು ಯಾರೆಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಟ್.


ರೆಹಬ್ಬಾಮನು ಬಲಾಢ್ಯನಾದ ರಾಜನಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ ನಂತರ ಅವನೂ ಯೆಹೂದದ ಜನರೂ ದೇವರಾದ ಯೆಹೋವನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದರು.


ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.


ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.


ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.


ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು