Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:11 - ಪರಿಶುದ್ದ ಬೈಬಲ್‌

11 ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:11
19 ತಿಳಿವುಗಳ ಹೋಲಿಕೆ  

“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.


ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು.


ಹೀಗಿದ್ದರೂ ನನ್ನ ಒಡೆಯನ ಸೈನ್ಯಾಧಿಕಾರಿಗಳಲ್ಲಿ ಕನಿಷ್ಠನಾದವನನ್ನು ಸೋಲಿಸಲು ನಿಮ್ಮಿಂದಾಗದು. ಆದ್ದರಿಂದ ನೀವು ಈಜಿಪ್ಟಿನವರ ಅಶ್ವದಳದ ಮೇಲೆ ಯಾಕೆ ಭರವಸವಿಡುತ್ತೀರಿ?


ಅಶ್ಶೂರವು ಹೀಗೆ ಹೇಳುತ್ತದೆ: ‘ನನ್ನ ನಾಯಕರೆಲ್ಲಾ ರಾಜರಂತಿರುತ್ತಾರೆ.


ಫಸಲು ಇಲ್ಲಿ ಉತ್ತಮವಾಗಿದೆ. ನಾವು ಪಾಪಮಾಡಿದ್ದರಿಂದ ನಮ್ಮ ಸುಗ್ಗಿಯು ನಮ್ಮನ್ನಾಳುವ ರಾಜರಿಗೆ ಹೋಗಿಬಿಡುತ್ತದೆ. ಆ ರಾಜರುಗಳು ನಮ್ಮನ್ನೂ ನಮ್ಮ ದನಕರುಗಳನ್ನೂ ತಮ್ಮ ಹತೋಟಿಯೊಳಗೆ ಇಟ್ಟಿರುತ್ತಾರೆ. ನಮ್ಮನ್ನು ತಮಗೆ ಇಷ್ಟಬಂದಂತೆ ನಡಿಸುತ್ತಾರೆ. ಆದ್ದರಿಂದ ನಾವು ಬಹಳ ಸಂಕಟದಲ್ಲಿ ಸಿಕ್ಕಿಕೊಂಡಿದ್ದೇವೆ.”


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ಬಾಬಿಲೋನಿನವರು ರಾಜನಾದ ಚಿದ್ಕೀಯನನ್ನು ರಿಬ್ಲದಲ್ಲಿ ಬಾಬಿಲೋನ್ ರಾಜನಿಗೆ ಒಪ್ಪಿಸಿದರು. ಬಾಬಿಲೋನ್ ರಾಜನು ಚಿದ್ಕೀಯನನ್ನು ದಂಡಿಸಲು ತೀರ್ಮಾನಿಸಿದನು.


ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.


ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.


ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕೃತ್ಯಗಳನ್ನೂ ಬರೆಯಲಾಗಿದೆ.


ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.


ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು