2 ಪೂರ್ವಕಾಲ ವೃತ್ತಾಂತ 33:12 - ಪರಿಶುದ್ದ ಬೈಬಲ್12 ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿ |
ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.