Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:13 - ಪರಿಶುದ್ದ ಬೈಬಲ್‌

13 ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಲಾಲಿಸಿ ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬದು ಮನಸ್ಸೆಗೆ ಮಂದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:13
41 ತಿಳಿವುಗಳ ಹೋಲಿಕೆ  

ಹಾಗೆ ನಾವು ನಮ್ಮ ಪ್ರಯಾಣದ ಕುರಿತು ದೇವರಿಗೆ ಉಪವಾಸ ಪ್ರಾರ್ಥನೆ ಮಾಡಿದೆವು. ಆತನು ಅದನ್ನು ಅನುಗ್ರಹಿಸಿದನು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ರಾಜನಾದ ನೆಬೂಕದ್ನೆಚ್ಚರನೇ, ನಿನ್ನನ್ನು ಬಲವಂತದಿಂದ ಜನರಿಂದ ದೂರಮಾಡುವರು. ನೀನು ಕಾಡುಪ್ರಾಣಿಗಳೊಂದಿಗೆ ವಾಸಮಾಡುವೆ; ಹಸುಗಳಂತೆ ಹುಲ್ಲು ತಿನ್ನುವೆ; ಇಬ್ಬನಿಯಿಂದ ತೋಯಿಸಿಕೊಳ್ಳುವೆ. ಏಳು ವರ್ಷಗಳು ಕಳೆಯುವವು. ಆಗ ನೀನು ಮಹೋನ್ನತನಾದ ದೇವರು ಮಾನವರ ಸಾಮ್ರಾಜ್ಯದ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ರಾಜ್ಯವನ್ನು ಕೊಡುತ್ತಾನೆ ಎಂಬ ಪಾಠವನ್ನು ಕಲಿಯುವೆ.


ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.


ಯೆಹೋವನು ರಾಜನ ಮನಸ್ಸನ್ನು ನೀರಿನ ಕಾಲುವೆಯಂತೆ ಹತೋಟಿಯಲ್ಲಿಡುವನು. ಆತನು ತನ್ನ ಇಷ್ಟಾನುಸಾರ ಅದಕ್ಕೆ ಮಾರ್ಗದರ್ಶನ ನೀಡುವನು.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


ನೀನು ಪ್ರಾರ್ಥಿಸುವೆ, ಆತನು ನಿನಗೆ ಕಿವಿಗೊಡುವನು; ಆತನಿಗೆ ನಿನ್ನ ಹರಕೆಗಳನ್ನು ಸಲ್ಲಿಸುವೆ.


ಯೋಬನೇ, ನೀನು ಸರ್ವಶಕ್ತನಾದ ದೇವರಿಗೆ ಅಭಿಮುಖನಾಗಿ ನಿನ್ನ ಮನೆಯಲ್ಲಿರುವ ಪಾಪವನ್ನು ನಿರ್ಮೂಲಮಾಡಿದರೆ ಉದ್ಧಾರವಾಗುವೆ.


ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಗೌರವಿಸುವ ಮನಸ್ಸನ್ನು ರಾಜನ ಹೃದಯದಲ್ಲಿರಿಸಿದ್ದಕ್ಕೆ ಆತನಿಗೆ ಸ್ತೋತ್ರ!


ನಿಮ್ಮಲ್ಲಿ ಆಹಾರವಿರಲಿಲ್ಲ; ಕುಡಿಯಲು ದ್ರಾಕ್ಷಾರಸವಾಗಲಿ ಪಾನೀಯವಾಗಲಿ ಇರಲಿಲ್ಲ. ಆದರೆ ಯೆಹೋವನು ಮನ್ನವನ್ನು ಮತ್ತು ನೀರನ್ನು ಕೊಟ್ಟನು. ಆತನೇ ನಿಮ್ಮ ದೇವರಾದ ಯೆಹೋವನೆಂದು ನೀವು ಅರಿತುಕೊಳ್ಳುವ ಹಾಗೆ ಮಾಡಿದನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.


ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.


ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.


ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”


ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.


ಆಗ ದೇವರು ನನಗೆ ಸರಿಯಾದ ಬುದ್ಧಿಯನ್ನು ಕೊಟ್ಟನು. ನನಗೆ ರಾಜನ ಗೌರವ, ಪ್ರಭಾವ, ವೈಭವಗಳು ಮತ್ತೆ ಲಭಿಸಿದವು. ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸ್ವೀಕರಿಸಿದರು. ನಾನು ಮತ್ತೆ ಅರಸನಾದೆನು. ನಾನು ಮೊದಲಿಗಿಂತಲೂ ಅಧಿಕ ಶಕ್ತಿಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನಾದೆನು.


ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.


ಈ ದೃಶ್ಯವನ್ನು ಜನರೆಲ್ಲರೂ ನೋಡಿದರು. ಜನರು ನೆಲಕ್ಕೆ ಬಾಗಿ ನಮಸ್ಕರಿಸುತ್ತಾ, “ಯೆಹೋವನೇ ದೇವರು! ಯೆಹೋವನೇ ದೇವರು!” ಎಂದು ಕೂಗಿದರು.


ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ


ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.


ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು.


ಆತನ ಉಪದೇಶವನ್ನು ಸ್ವೀಕರಿಸಿಕೊ. ಆತನ ವಾಕ್ಯಗಳನ್ನು ನಿನ್ನ ಹೃದಯದಲ್ಲಿಟ್ಟುಕೊ.


ಆತನು ಅವರ ದುಷ್ಕೃತ್ಯವನ್ನೂ ಪಾಪವನ್ನೂ ಗರ್ವವನ್ನೂ ಅವರಿಗೆ ತಿಳಿಯಪಡಿಸುವನು.


ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.


ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.


ಅವರು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟರು. ಆತನು ಅವರನ್ನು ಆಪತ್ತುಗಳಿಂದ ಬಿಡಿಸಿದನು.


ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎಂದು ಹೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು