Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:14 - ಪರಿಶುದ್ದ ಬೈಬಲ್‌

14 ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಾದ ಮೇಲೆ, ಅವನು ಗೀಹೋನ್ ಬುಗ್ಗೆಯ ದಕ್ಷಿಣದ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ಕಣಿವೆಯಲ್ಲಿ, ಓಫೆಲ್ ಗುಡ್ಡದ ಸುತ್ತಲೂ ಇದ್ದ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿದನು. ಜುದೇಯ ನಾಡಿನ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲಿ ಸೇನಾಪತಿಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನು ಬಾಗಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದ ನಗರದ ಹೊರಗಣ ಬಲು ಎತ್ತರವಾದ ಗೋಡೆಯನ್ನು ಕಟ್ಟಿಸಿ ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಪತಿಗಳನ್ನಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ಮೀನು ಬಾಗಿಲ ದ್ವಾರದವರೆಗಿರುವ ತಗ್ಗಿನಲ್ಲಿ ಓಫೇಲ್ ಗುಡ್ಡದ ಸುತ್ತಲೂ ಗೋಡೆಯನ್ನು ಕಟ್ಟಿಸಿ, ಅದನ್ನು ಬಹಳ ಎತ್ತರಮಾಡಿ, ಯೆಹೂದದ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:14
12 ತಿಳಿವುಗಳ ಹೋಲಿಕೆ  

ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣಿಗಳನ್ನಿಟ್ಟು ಭದ್ರಪಡಿಸಿದರು.


ಯೋತಾಮನು ದೇವಾಲಯದ ಮೇಲಿನ ಬಾಗಿಲನ್ನು ತಿರುಗಿ ಕಟ್ಟಿಸಿದನು. ಪೌಳಿಗೋಡೆಯ ಮೇಲೆ ಓಫೇಲ್ ಎಂಬ ಸ್ಥಳದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.


ಯೆಹೋವನು ಇನ್ನೂ ಹೇಳುವುದೇನೆಂದರೆ, “ಆ ಸಮಯದಲ್ಲಿ ಜೆರುಸಲೇಮಿನ ಮೀನು ಬಾಗಿಲಲ್ಲಿ ಜನರು ಸಹಾಯಕ್ಕಾಗಿ ಮೊರೆಯಿಡುವರು. ನಗರದ ಇತರ ಕಡೆಗಳಿಂದ ಜನರು ರೋಧಿಸುವರು. ನಗರದ ಸುತ್ತಲಿರುವ ಬೆಟ್ಟಗಳಲ್ಲಿ ನಾಶವಾಗುವ ಶಬ್ದವನ್ನು ಜನರು ಕೇಳುವರು.


ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.


ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.


ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.


ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು.


ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಆ ಶಬ್ದವನ್ನೇ ನೀವು ಕೇಳುತ್ತಿರುವುದು.


ಜನರು ರಾಜಧಾನಿಯನ್ನು ತೊರೆದುಬಿಡುವರು. ಅರಮನೆ, ಬುರುಜುಗಳೆಲ್ಲವೂ ನಿರ್ಜನವಾಗಿವೆ. ಜನರು ಮನೆಗಳಲ್ಲಿ ವಾಸಿಸದೆ ಗುಹೆಗಳಲ್ಲಿ ವಾಸಮಾಡುವರು. ಕಾಡುಕತ್ತೆಗಳೂ ಕುರಿಗಳೂ ನಗರದಲ್ಲಿ ವಾಸಿಸುವವು. ಪಶುಗಳು ಅಲ್ಲಿ ಹುಲ್ಲು ಮೇಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು