2 ಪೂರ್ವಕಾಲ ವೃತ್ತಾಂತ 33:15 - ಪರಿಶುದ್ದ ಬೈಬಲ್15 ಅನ್ಯದೇವತೆಗಳ ವಿಗ್ರಹವನ್ನು ತೆಗಿಸಿದನು; ದೇವಾಲಯದೊಳಗಿದ್ದ ವಿಗ್ರಹವನ್ನು ತೆಗೆದುಹಾಕಿಸಿದನು. ಜೆರುಸಲೇಮಿನಲ್ಲಿಯೂ ದೇವಾಲಯದ ಗುಡ್ಡದಲ್ಲಿಯೂ ಪ್ರತಿಷ್ಠಾಪಿಸಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಕಟ್ಟಿಸಿದ ಎಲ್ಲಾ ವೇದಿಕೆಗಳನ್ನು ಜೆರುಸಲೇಮಿನಿಂದ ಹೊರಗೆ ಬಿಸಾಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನ್ಯದೇವತಾ ಪ್ರತಿಮೆಗಳನ್ನು ಹಾಗು ತಾನು ಮಾಡಿಸಿದ್ದ ಸ್ತಂಭವನ್ನು ಸರ್ವೇಶ್ವರನ ಆಲಯದಿಂದ ತೆಗಿಸಿದನು. ಸರ್ವೇಶ್ವರನ ಮಂದಿರವಿರುವ ಗುಡ್ಡದಲ್ಲೂ ಜೆರುಸಲೇಮಿನಲ್ಲೂ ಕಟ್ಟಿಸಿದ್ದ ಎಲ್ಲ ಯಜ್ಞವೇದಿಗಳನ್ನು ಕೆಡವಿ, ಅವುಗಳನ್ನು ಪಟ್ಟಣದ ಹೊರಗೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನ್ಯದೇವತಾಪ್ರತಿಮೆಗಳನ್ನೂ ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗಿಸಿ ಯೆಹೋವಮಂದಿರವಿರುವ ಗುಡ್ಡದಲ್ಲಿಯೂ ಯೆರೂಸಲೇವಿುನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು. ಅಧ್ಯಾಯವನ್ನು ನೋಡಿ |