Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:17 - ಪರಿಶುದ್ದ ಬೈಬಲ್‌

17 ಜನರು ಉನ್ನತಸ್ಥಳಗಳಲ್ಲಿ ಯಜ್ಞವನ್ನು ಮಾಡುತ್ತಿದ್ದರೂ ಅದನ್ನು ಯೆಹೋವನಿಗೋಸ್ಕರವೇ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:17
6 ತಿಳಿವುಗಳ ಹೋಲಿಕೆ  

ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.


ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.


ಯೆಹೋಷಾಫಾಟನು ಒಳ್ಳೆಯವನಾಗಿದ್ದನು. ಅವನು ತನ್ನ ತಂದೆಯ ಮಾರ್ಗವನ್ನು ಅನುಸರಿಸಿದನು. ಯೆಹೋವನು ಅಪೇಕ್ಷಿಸಿದವುಗಳಿಗೆಲ್ಲ ಅವನು ವಿಧೇಯನಾಗಿದ್ದನು. ಆದರೆ ಯೆಹೋಷಾಫಾಟನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾ ಧೂಪಹಾಕುತ್ತಾ ಇದ್ದರು.


ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.


ಆದರೆ ಅವನು ಉನ್ನತಸ್ಥಳಗಳನ್ನು ನಿರ್ಮೂಲಗೊಳಿಸಲಿಲ್ಲ. ಯೆಹೂದದ ಜನರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಪೂರ್ಣ ಮನಸ್ಸಿಟ್ಟಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು