2 ಪೂರ್ವಕಾಲ ವೃತ್ತಾಂತ 33:22 - ಪರಿಶುದ್ದ ಬೈಬಲ್22 ಅವನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಮನಸ್ಸೆಯು ಯೆಹೋವನಿಗೆ ಇಷ್ಟವಾದುದ್ದನ್ನು ಮಾಡಿದಂತೆ ಅವನು ಮಾಡಲಿಲ್ಲ. ಅವನ ತಂದೆಯಾದ ಮನಸ್ಸೆಯು ಮಾಡಿದ ಎರಕದ ಬೊಂಬೆಗಳಿಗೂ ಕೆತ್ತನೆ ಕೆಲಸದ ವಿಗ್ರಹಗಳಿಗೂ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿ |