2 ಪೂರ್ವಕಾಲ ವೃತ್ತಾಂತ 33:23 - ಪರಿಶುದ್ದ ಬೈಬಲ್23 ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು. ಅಧ್ಯಾಯವನ್ನು ನೋಡಿ |
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.