2 ಪೂರ್ವಕಾಲ ವೃತ್ತಾಂತ 33:3 - ಪರಿಶುದ್ದ ಬೈಬಲ್3 ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರಿಗಿ ಸ್ಥಾಪಿಸಿ ಬಾಳ್‍ದೇವತೆಗಳಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿ |
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.