2 ಪೂರ್ವಕಾಲ ವೃತ್ತಾಂತ 33:6 - ಪರಿಶುದ್ದ ಬೈಬಲ್6 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು. ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”