2 ಪೂರ್ವಕಾಲ ವೃತ್ತಾಂತ 34:12 - ಪರಿಶುದ್ದ ಬೈಬಲ್12-13 ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕೆಲಸಗಾರರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ, ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು. ಅಧ್ಯಾಯವನ್ನು ನೋಡಿ |