Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:19 - ಪರಿಶುದ್ದ ಬೈಬಲ್‌

19 ಅರಸನಾದ ಯೋಷೀಯನು ಧರ್ಮಶಾಸ್ತ್ರದ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:19
14 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.


ನಾನು ಧರ್ಮಶಾಸ್ತ್ರಕ್ಕಾಗಿ ಜೀವಿಸುವುದನ್ನು ತೊರೆದುಬಿಟ್ಟೆನು. ನನ್ನನ್ನು ಧರ್ಮಶಾಸ್ತ್ರವೇ ಕೊಂದಿತು. ಈಗ ನಾನು ದೇವರಿಗಾಗಿ ಜೀವಿಸಬೇಕೆಂದು ಧರ್ಮಶಾಸ್ತ್ರದ ಪಾಲಿಗೆ ಸತ್ತುಹೋದೆನು. ನಾನು ಕ್ರಿಸ್ತನೊಂದಿಗೆ ಶಿಲುಬೆಗೇರಿಸಲ್ಪಟ್ಟೆನು.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ರಾಜನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.


ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.


ಎಂದು ಹೇಳಿ ಆ ಪುಸ್ತಕವನ್ನು ಓದತೊಡಗಿದನು. ಅವನು ಅರಸನ ಮುಂದೆ ನಿಂತುಕೊಂಡು ಓದುತ್ತಿರಲು


ಆಗ ಅರಸನು ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕನ ಮಗನಾದ ಅಬ್ದೋನ್, ಕಾರ್ಯದರ್ಶಿಯಾದ ಶಾಫಾನ್ ಮತ್ತು ಸೇವಕನಾದ ಅಸಾಯ ಇವರಿಗೆ ಹೇಳಿದ್ದೇನೆಂದರೆ,


ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು