21 “ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.
21 “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
21 “ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
21 ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.
21 “ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”
ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.
ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.
ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.
ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.
ಹಿಲ್ಕೀಯನೂ ಅರಸನ ಸೇವಕರೂ ಪ್ರವಾದಿನಿಯಾಗಿದ್ದ ಹುಲ್ದಳ ಬಳಿಗೆ ಹೋದರು. ಆಕೆ ತೊಕ್ಹತನ ಮಗನಾದ ಶಲ್ಲೂಮನ ಹೆಂಡತಿಯಾಗಿದ್ದಳು. ತೊಕ್ಹತನು ಹಸ್ರನ ಮಗ. ಇವನು ಅರಸನ ಬಟ್ಟೆಬರೆಗಳ ಮುಖ್ಯಸ್ತನಾಗಿದ್ದನು. ಹುಲ್ದಳು ಜೆರುಸಲೇಮಿನ ಹೊಸ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದಳು. ಅರಸನು ಹೇಳಿದ್ದನ್ನೆಲ್ಲಾ ಸೇವಕರು ಆಕೆಗೆ ತಿಳಿಸಿದರು.
ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು.