2 ಪೂರ್ವಕಾಲ ವೃತ್ತಾಂತ 34:24 - ಪರಿಶುದ್ದ ಬೈಬಲ್24 ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದ ದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು. ಅಧ್ಯಾಯವನ್ನು ನೋಡಿ |
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”