Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:25 - ಪರಿಶುದ್ದ ಬೈಬಲ್‌

25 ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:25
24 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು.


ಆಗ ಎಲ್ಲಾ ಜನರು ಯೆಹೋವನಾದ ನಾನೇ ಬೆಂಕಿಯನ್ನಿಟ್ಟಿದ್ದು ಎಂದು ತಿಳಿದುಕೊಳ್ಳುವರು. ಆ ಬೆಂಕಿಯು ನಂದಿಸಲ್ಪಡುವುದಿಲ್ಲ.’”


ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು.


ಯೆಹೋವನು ವೈರಿಯಂತೆ ತನ್ನ ಬಿಲ್ಲನ್ನು ಬಾಗಿಸಿದನು. ತನ್ನ ಬಲಗೈಯಲ್ಲಿ ಖಡ್ಗವನ್ನು ಧರಿಸಿದನು: ಆತನು ಯೆಹೂದದ ಎಲ್ಲ ಆಕರ್ಷಕ ಜನರನ್ನು ಕೊಂದುಹಾಕಿದನು. ಆತನು ಶತ್ರುವಿನಂತೆ ಅವರನ್ನು ಕೊಂದನು. ಆತನು ತನ್ನ ರೋಷಾಗ್ನಿಯನ್ನು ಹೊರಸೂಸಿದನು. ಆತನು ಅದನ್ನು ಚೀಯೋನಿನ ಗುಡಾರಗಳ ಮೇಲೆ ಸುರಿಸಿದನು.


ಯೆಹೋವನ ಮನುಷ್ಯರಾಗಿರಿ, ನಿಮ್ಮ ಹೃದಯ ಪರಿವರ್ತನೆ ಮಾಡಿಕೊಳ್ಳಿರಿ. ಯೆಹೂದದ ಜನಗಳೇ, ಜೆರುಸಲೇಮಿನ ಜನರೇ, ನೀವು ಬದಲಾಗದಿದ್ದರೆ ನನಗೆ ವಿಪರೀತ ಕೋಪ ಬರುವುದು. ನನ್ನ ಕೋಪವು ಬೆಂಕಿಯ ಜ್ವಾಲೆಯಂತೆ ಭರದಿಂದ ಹಬ್ಬುವದು. ನನ್ನ ಕೋಪವು ನಿಮ್ಮನ್ನು ಸುಟ್ಟು ಬೂದಿ ಮಾಡುವುದು. ಯಾರಿಂದಲೂ ಆ ಬೆಕಿಯನ್ನು ಆರಿಸುವುದು ಸಾಧ್ಯವಾಗುವದಿಲ್ಲ. ಇದೆಲ್ಲ ಏಕೆ ನಡೆಯುವುದು? ನೀವು ಮಾಡಿದ ದುಷ್ಕೃತ್ಯಗಳಿಂದಲೇ.”


ಆದ್ದರಿಂದ ಯೆಹೋವನು ಅವರ ಮೇಲೆ ಕೋಪಗೊಂಡನು. ಅವರಿಗೆ ವಿರುದ್ಧವಾಗಿ ಬಲವಾದ ಯುದ್ಧಗಳು ನಡೆಯುವಂತೆ ಮಾಡಿದನು. ಇಸ್ರೇಲ್ ಜನರ ಸುತ್ತಲೂ ಬೆಂಕಿಯು ಆವರಿಸಿಕೊಂಡಿರುವಂತಿದ್ದರೂ ಅವರಿಗೆ ಅದರ ಪ್ರಜ್ಞೆಯಿರಲಿಲ್ಲ. ಅವರೇ ಉರಿಯುತ್ತಿರುವಂತೆ ಅದಿತ್ತು. ಆದರೆ ಅವರು ವಿಷಯಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಲಿಲ್ಲ.


ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ.


ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’


ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.


“ಆದರೆ ಯೆಹೋವನನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಾದ ಯೋಷೀಯನಿಗೆ ಹೀಗೆ ಹೇಳಿರಿ: ‘ನೀನು ಸ್ವಲ್ಪಕಾಲದ ಹಿಂದೆ ಕೇಳಿದ ವಿಷಯಗಳ ಬಗ್ಗೆ ಇಸ್ರೇಲಿನ ಯೆಹೋವನು ಹೇಳುವುದೇನೆಂದರೆ,


ಆ ಪ್ರಶ್ನೆಗೆ ಈ ಉತ್ತರ: ‘ಯೆಹೂದದ ಜನರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಅನುಸರಣೆಯನ್ನು ಬಿಟ್ಟುಬಿಟ್ಟರು. ಅವರು ಬೇರೆ ದೇವರುಗಳ ಸೇವೆಯನ್ನು ಮಾಡಿ ಪೂಜಿಸಿದರು.’”


ಆ ದೇಶದಲ್ಲಿ ಜನರನ್ನು ಕೊಲೆಮಾಡಿ ಅವರ ರಕ್ತವನ್ನು ನೆಲದ ಮೇಲೆ ಸುರಿದರು. ತಮ್ಮ ವಿಗ್ರಹಗಳಿಂದ ದೇಶವನ್ನು ಹೊಲಸು ಮಾಡಿದರು. ಆದ್ದರಿಂದ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಬುದನ್ನು ನಾನು ತೋರಿಸಿದೆನು.


ಅರಸನೂ ಆ ನಾಯಕರುಗಳೂ ದೇವಾಲಯವನ್ನು ನಿರಾಕರಿಸಿ ಅಶೇರ ಸ್ತಂಭಗಳನ್ನೂ ಇತರ ವಿಗ್ರಹಗಳನ್ನೂ ಆರಾಧಿಸಿದರು. ಯೆಹೋವನು ಜೆರುಸಲೇಮಿನ ಮತ್ತು ಯೆಹೂದದ ಜನರ ಮೇಲೆ ಕೋಪಗೊಂಡನು. ಯಾಕೆಂದರೆ ಅರಸನೂ ಆ ನಾಯಕರುಗಳೂ ಯೆಹೋವನ ಮುಂದೆ ದೋಷಿಗಳಾಗಿದ್ದರು.


ನಮ್ಮ ಪೂರ್ವಿಕರು ಪರಲೋಕದ ನಮ್ಮ ದೇವರನ್ನು ಸಿಟ್ಟಿಗೆಬ್ಬಿಸಿದರು. ಆಗ ಆತನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ನಮ್ಮ ಪೂರ್ವಿಕರನ್ನು ಕೊಟ್ಟುಬಿಟ್ಟನು. ನೆಬೂಕದ್ನೆಚ್ಚರನು ದೇವಾಲಯವನ್ನು ಹಾಳುಗೆಡವಿ ಜನರನ್ನು ಬಲವಂತದಿಂದ ಸೆರೆಯಾಗಿ ಬಾಬಿಲೋನಿಗೆ ಒಯ್ದನು.


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು