2 ಪೂರ್ವಕಾಲ ವೃತ್ತಾಂತ 34:27 - ಪರಿಶುದ್ದ ಬೈಬಲ್27 ಯೋಷೀಯನೇ, ನೀನು ನನ್ನ ಮಾತುಗಳನ್ನು ಕೇಳಿದಾಗ ನನ್ನ ಮುಂದೆ ತಗ್ಗಿಸಿಕೊಂಡು ಪಶ್ಚಾತ್ತಾಪಪಟ್ಟು ನಿನ್ನ ಬಟ್ಟೆಗಳನ್ನು ಹರಿದುಕೊಂಡೆ. ನನ್ನ ಮುಂದೆ ನೀನು ಗೋಳಾಡಿದೆ. ನಿನ್ನ ಹೃದಯವು ಮೃದುವಾದದ್ದರಿಂದ, ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು, ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”