2 ಪೂರ್ವಕಾಲ ವೃತ್ತಾಂತ 34:3 - ಪರಿಶುದ್ದ ಬೈಬಲ್3 ಅವನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪಿತೃವಾದ ದಾವೀದನು ಅನುಸರಿಸಿದ್ದ ದೇವರನ್ನು ಅನುಸರಿಸಿದನು. ಆಗ ಅವನು ಇನ್ನೂ ಎಳೆಯ ಪ್ರಾಯದವನಾಗಿದ್ದನು. ಅವನು ಪಟ್ಟಕ್ಕೆ ಬಂದ ಹನ್ನೆರಡನೆಯ ವರ್ಷದಲ್ಲಿ, ಜೆರುಸಲೇಮಿನಲ್ಲಿ ಮತ್ತು ಯೆಹೂದದಲ್ಲಿದ್ದ ಎತ್ತರವಾದ ಸ್ಥಳಗಳನ್ನೂ ಅಶೇರಸ್ತಂಭಗಳನ್ನೂ ಎರಕದ ಮತ್ತು ಕೆತ್ತನೆಯ ವಿಗ್ರಹಗಳನ್ನೂ ನಾಶಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು. ಅಧ್ಯಾಯವನ್ನು ನೋಡಿ |
ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು.
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”