2 ಪೂರ್ವಕಾಲ ವೃತ್ತಾಂತ 34:30 - ಪರಿಶುದ್ದ ಬೈಬಲ್30 ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಆ ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು. ಅಧ್ಯಾಯವನ್ನು ನೋಡಿ |
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’