Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:31 - ಪರಿಶುದ್ದ ಬೈಬಲ್‌

31 ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:31
30 ತಿಳಿವುಗಳ ಹೋಲಿಕೆ  

ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.


ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.


ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು.


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ಹಿಜ್ಕೀಯನು ತಾನು ಪ್ರಾರಂಭಿಸಿದ ಪ್ರತಿಯೊಂದು ಕಾರ್ಯಗಳನ್ನೂ ದೇವಾಲಯದ ಕಾರ್ಯಗಳನ್ನೂ ದೇವರ ಕಟ್ಟಳೆಗಳನ್ನೂ ಅನುಸರಿಸುವದನ್ನು ಪೂರ್ಣಹೃದಯದಿಂದ ಮಾಡಿ ಯಶಸ್ವಿಯಾದನು.


ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.


ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.


ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:


ನೀವು ನಿಮ್ಮ ದೇವರಾದ ಯೆಹೋವನನ್ನು ಅನುಸರಿಸಬೇಕು, ಗೌರವಿಸಬೇಕು, ಆತನ ಆಜ್ಞೆಗಳಿಗೆ ವಿಧೇಯರಾಗಬೇಕು. ಆತನು ಹೇಳಿದಂತೆ ನಡೆಯಬೇಕು ಮತ್ತು ಆತನನ್ನು ತೊರೆದುಬಿಡದೆ ಸೇವಿಸಬೇಕು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಆಮೇಲೆ ಎಲ್ಲಾ ಜೆರುಸಲೇಮಿನವರಿಂದಲೂ ಮತ್ತು ಬೆನ್ಯಾಮೀನ್ಯರಿಂದಲೂ ಪ್ರಮಾಣ ಮಾಡಿಸಿದನು. ತಮ್ಮ ಪೂರ್ವಿಕರು ವಿಧೇಯರಾಗಿದ್ದ ದೇವರಿಗೆ ತಾವೂ ವಿಧೇಯರಾಗಿರುವುದಾಗಿ ಅವರು ಪ್ರಮಾಣ ಮಾಡಿದರು.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನೇ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.


“ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.


ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು