2 ಪೂರ್ವಕಾಲ ವೃತ್ತಾಂತ 34:4 - ಪರಿಶುದ್ದ ಬೈಬಲ್4 ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ, ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.