5 ಯೋಷೀಯನು ಬಾಳ್ ದೇವರ ವಿಗ್ರಹಗಳನ್ನೂ ಪೂಜಾರಿಯವರ ಎಲುಬುಗಳನ್ನೂ ಅವರ ವೇದಿಕೆಗಳ ಮೇಲೆಯೇ ಸುಟ್ಟುಬಿಟ್ಟನು. ಹೀಗೆ ಅವನು ಯೆಹೂದವನ್ನು ಮತ್ತು ಜೆರುಸಲೇಮನ್ನು ಶುಚಿಗೊಳಿಸಿದನು ಮತ್ತು ಶುದ್ಧೀಕರಿಸಿದನು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”
ಇಸ್ರೇಲಿಗೆ ಇಷ್ಟೆಲ್ಲಾ ದಂಡನೆ ಆದರೂ ಅವಳ ಸೋದರಿಯಾದ ಯೆಹೂದ ತುಂಬುಹೃದಯದಿಂದ ನನ್ನಲ್ಲಿಗೆ ಬರಲಿಲ್ಲ. ಅವಳು ನನ್ನಲ್ಲಿಗೆ ತಿರುಗಿ ಬರುವ ನಟನೆಯನ್ನು ಮಾತ್ರ ಮಾಡಿದಳು. ಇದು ಯೆಹೋವನಾದ ನನ್ನ ನುಡಿ” ಎಂದು ಹೇಳಿದನು.
ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.
ಯೋಷೀಯನು ಸುತ್ತಲೂ ನೋಡಿದಾಗ ಬೆಟ್ಟದ ಮೇಲಿದ್ದ ಸ್ಮಶಾನಗಳನ್ನು ಕಂಡನು. ಅವನು ಜನರನ್ನು ಕಳುಹಿಸಿ ಆ ಸ್ಮಶಾನಗಳಿಂದ ಎಲುಬುಗಳನ್ನು ತರಿಸಿ ಆ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿಯಲ್ಲಿ, ಯೋಷೀಯನು ಯಜ್ಞವೇದಿಕೆಯನ್ನು ಹೊಲಸು ಮಾಡಿದನು. ಇದು ಪ್ರವಾದಿಯು ಘೋಷಿಸಿದ್ದ ಯೆಹೋವನ ಸಂದೇಶದಂತೆ ಸಂಭವಿಸಿತು. ಯಾರೊಬ್ಬಾಮನು ಯಜ್ಞವೇದಿಕೆಯ ಪಕ್ಕದಲ್ಲಿ ನಿಂತಿದ್ದಾಗ ಪ್ರವಾದಿಯು ಈ ಸಂಗತಿಗಳನ್ನು ಪ್ರಕಟಿಸಿದ್ದನು. ನಂತರ ಯೋಷೀಯನು ಸುತ್ತಲೂ ನೋಡಿದಾಗ, ದೇವಮನುಷ್ಯನ ಸಮಾಧಿಯನ್ನು ಕಂಡನು.
ಇಸ್ರೇಲ್ ಜನರ ಬಳಿ ನಾನಾ ಜನಾಂಗದವರ ವಿಗ್ರಹಗಳಿದ್ದವು. ಆದರೆ ಯೋಷೀಯನು ಆ ವಿಗ್ರಹಗಳನ್ನೆಲ್ಲಾ ನಾಶಮಾಡಿದನು. ಇಸ್ರೇಲರು ದೇವರಾದ ಯೆಹೋವನ ಸೇವೆಮಾಡುವಂತೆ ಯೋಷೀಯನು ಮಾಡಿದನು. ಯೋಷೀಯನು ಬದುಕಿದ್ದಷ್ಟು ಕಾಲ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಸೇವೆಮಾಡಿದರು.