2 ಪೂರ್ವಕಾಲ ವೃತ್ತಾಂತ 34:6 - ಪರಿಶುದ್ದ ಬೈಬಲ್6 ಅದೇ ಪ್ರಕಾರ ಎಫ್ರಾಯೀಮ್, ಮನಸ್ಸೆ, ಸಿಮೆಯೋನ್ ಮತ್ತು ನಫ್ತಾಲಿ ಪ್ರಾಂತ್ಯಗಳ ಉದ್ದಕ್ಕೂ ಮಾಡಿದನು. ಆ ಪಟ್ಟಣಗಳ ಸಮೀಪದಲ್ಲಿದ್ದ ಹಾಳುಬಿದ್ದವುಗಳಿಗೂ ಅವನು ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಸುತ್ತಣ ಊರುಗಳಲಿಯೂ ಬಯಲುಗಳಲ್ಲಿದ್ದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮನಸ್ಸೆ, ಎಫ್ರಯಿಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಊರುಗಳ ಸುತ್ತಲು ಹಾಳುಬೀಳುಗಳಲ್ಲಿದ್ದ ಬಲಿಪೀಠಗಳನ್ನು ಕೆಡವಿಸಿದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮನಸ್ಸೆ ಎಫ್ರಾಯೀಮ್ ಸಿಮೆಯೋನ್ ನಫ್ತಾಲಿ ಪ್ರಾಂತಗಳ ಊರುಗಳ ಸುತ್ತಣ ಹಾಳುಬೀಳುಗಳಲ್ಲಿದ್ದ ಯಜ್ಞವೇದಿಗಳನ್ನು ಕೆಡವಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು. ಅಧ್ಯಾಯವನ್ನು ನೋಡಿ |
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.