Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:7 - ಪರಿಶುದ್ದ ಬೈಬಲ್‌

7 ಅಲ್ಲಿಂದ ಮುಂದೆ ಇಸ್ರೇಲ್ ದೇಶದಲ್ಲೂ ಪೂಜಾಸ್ಥಳಗಳನ್ನು ಕೆಡವಿ, ಅಶೇರಸ್ತಂಭಗಳನ್ನು ತುಂಡರಿಸಿ ಎರಕದ ಕೆತ್ತನೆಯ ವಿಗ್ರಹಗಳನ್ನು ಪುಡಿಮಾಡಿ, ಧೂಪವೇದಿಕೆಗಳನ್ನೆಲ್ಲಾ ನಾಶಮಾಡಿ ಜೆರುಸಲೇಮಿಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇವಿುಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:7
12 ತಿಳಿವುಗಳ ಹೋಲಿಕೆ  

ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.


ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.


ಯೋಷೀಯನು ಅರಸನಾದಾಗ ಎಂಟು ವರ್ಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.


ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.


ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.


ಯೋಷೀಯನು ಸಮಾರ್ಯದ ನಗರಗಳಲ್ಲಿದ್ದ ಉನ್ನತಸ್ಥಳಗಳ ಆಲಯಗಳನ್ನೆಲ್ಲ ನಾಶಗೊಳಿಸಿದನು. ಇಸ್ರೇಲಿನ ರಾಜರುಗಳು ಈ ಆಲಯಗಳನ್ನು ನಿರ್ಮಿಸಿದ್ದರು. ಇದರಿಂದ ಯೆಹೋವನು ಬಹಳ ಕೋಪಗೊಂಡಿದ್ದನು. ಯೋಷೀಯನು ಬೇತೇಲಿನಲ್ಲಿ ಆರಾಧನೆಯ ಸ್ಥಳಗಳನ್ನು ನಾಶಪಡಿಸಿದಂತೆ ಆ ಆಲಯಗಳನ್ನೂ ನಾಶಗೊಳಿಸಿದನು.


ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.


ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳುದೇವರುಗಳಿಗೆ, ತಾವು ಮಾಡಿದ ಬಲಿಪೀಠಗಳಿಗೆ, ಪೂಜಾಸ್ಥಳಗಳಿಗೆ ಅವರು ಹೋಗುವದಿಲ್ಲ.


ಆಕೆಯ ವಿಗ್ರಹಗಳೆಲ್ಲಾ ಒಡೆದು ಪುಡಿಮಾಡಲ್ಪಡುವವು. ಆಕೆಯ ಸೂಳೆತನದ ಹಣವು ಬೆಂಕಿಯಲ್ಲಿ ಸುಡಲ್ಪಡುವುದು. ಆಕೆಯ ಸುಳ್ಳುದೇವರ ವಿಗ್ರಹಗಳನ್ನೆಲ್ಲಾ ನಾಶಮಾಡುವೆನು. ಯಾಕೆಂದರೆ ಸಮಾರ್ಯ ನನಗೆ ಅಪನಂಬಿಗಸ್ತಳಾಗಿ ಧನಿಕಳಾದಳು. ನನಗೆ ನಂಬಿಗಸ್ತರಲ್ಲದವರು ಆಕೆಯಿಂದ ಅದನ್ನು ಕಸಿದುಕೊಳ್ಳುವರು.


ಅವರು ಬಾಳನ ಆಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ಹೊರತಂದು, ಆಲಯವನ್ನು ಸುಟ್ಟುಹಾಕಿದರು. ನಂತರ ಅವರು ಬಾಳನ ಸ್ಮಾರಕಸ್ತಂಭಗಳನ್ನು ಚೂರುಚೂರು ಮಾಡಿದರು.


ಯೋಷೀಯನು ಬೇತೇಲಿನ ಉನ್ನತಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕೆಡವಿಬಿಟ್ಟನು. ನೆಬಾಟನ ಮಗನಾದ ಯಾರೊಬ್ಬಾಮನು ಈ ಯಜ್ಞವೇದಿಕೆಯನ್ನು ನಿರ್ಮಿಸಿದ್ದನು. ಇಸ್ರೇಲರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋಷೀಯನು ಯಜ್ಞವೇದಿಕೆಯನ್ನು ಮತ್ತು ಉನ್ನತಸ್ಥಳವನ್ನು ಕೆಡವಿಬಿಟ್ಟನು. ಯೋಷೀಯನು ಯಜ್ಞವೇದಿಕೆಯ ಕಲ್ಲುಗಳನ್ನು ಪುಡಿಪುಡಿಮಾಡಿ ಧೂಳಿನಲ್ಲಿ ಬೆರಸಿದನು. ಅವನು ಅಶೇರಸ್ತಂಭವನ್ನು ಸುಟ್ಟುಹಾಕಿದನು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು