Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:8 - ಪರಿಶುದ್ದ ಬೈಬಲ್‌

8 ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವದಕ್ಕೋಸ್ಕರ ಅಚಲ್ಯನ ಮಗನಾದ ಶಾಫಾನನನ್ನೂ ಪುರಾಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:8
18 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಅವನ ಸೈನ್ಯದ ಅಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.


ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನ್ನು ಕಂಡೆನು. ಪ್ರತಿಯೊಬ್ಬನು ಒಂದು ಧೂಪಾರತಿಯನ್ನು ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.


ಬಾಬಿಲೋನಿನ ರಾಜನು ಕೆಲವು ಜನ ಯೆಹೂದಿಯರನ್ನು ಆ ಪ್ರದೇಶದಲ್ಲಿ ಬಿಟ್ಟುಹೋಗಿದ್ದಾನೆ ಮತ್ತು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರ ಅಧಿಪತಿಯನ್ನಾಗಿ ನೇಮಿಸಿದ್ದಾನೆ ಎಂಬ ಸಮಾಚಾರವನ್ನು ಮೋವಾಬ್, ಎದೋಮ್, ಅಮ್ಮೋನ್ ಮೊದಲಾದ ದೇಶಗಳಲ್ಲಿ ಚದುರಿಹೋಗಿದ್ದ ಯೆಹೂದಿಯರು ಕೇಳಿದರು.


ಅವರು ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಬಾಬಿಲೋನಿನ ಆ ಸೈನ್ಯಾಧಿಕಾರಿಗಳು ಯೆರೆಮೀಯನನ್ನು ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಬೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನ್ನು ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನ್ನ ಜನರೊಂದಿಗೆ ವಾಸಿಸತೊಡಗಿದನು.


ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.


ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.


ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.


ಚಿದ್ಕೀಯನು ಎಲ್ಲಾಸ ಮತ್ತು ಗೆಮರ್ಯರನ್ನು ರಾಜನಾದ ನೆಬೂಕದ್ನೆಚ್ಚರನ ಬಳಿಗೆ ಕಳಿಸಿದನು. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ಎಲ್ಲಾಸನು ಶಾಫಾನನ ಮಗನಾಗಿದ್ದನು. ಗೆಮರ್ಯನು ಹಿಲ್ಕೀಯನ ಮಗನಾಗಿದ್ದನು. ಬಾಬಿಲೋನಿಗೆ ಕೊಂಡೊಯ್ಯುವಂತೆ ಯೆರೆಮೀಯನು ಅವರಿಗಾಗಿ ಪತ್ರವನ್ನು ಕೊಟ್ಟನು. ಆ ಪತ್ರದಲ್ಲಿ ಹೀಗೆ ಬರೆಯಲಾಗಿತ್ತು:


ಶಾಫಾನನ ಮಗನಾದ ಅಹೀಕಾಮನು ಒಬ್ಬ ಪ್ರಮುಖ ವ್ಯಕ್ತಿಯಾಗಿದ್ದನು. ಅಹೀಕಾಮನು ಯೆರೆಮೀಯನಿಗೆ ಬೆಂಬಲ ಕೊಟ್ಟನು; ಯಾಜಕರು ಮತ್ತು ಪ್ರವಾದಿಗಳು ಅವನನ್ನು ಕೊಲ್ಲದಂತೆ ಕಾಪಾಡಿದರು.


ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು.


ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,


ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.


ಅದೋರಾಮನು ಬಿಟ್ಟೀಕೆಲಸ ಮಾಡುವವರ ಮೇಲಾಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.


ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ಅವನು ಯಾಜಕರನ್ನೂ ಲೇವಿಯರನ್ನೂ ಒಟ್ಟಾಗಿ ಕರೆದು, “ಯೆಹೂದ ದೇಶದ ಊರುಗಳಿಗೆ ಹೋಗಿ ಜನರು ಪ್ರತಿ ವರ್ಷ ದೇವಾಲಯಕ್ಕೆ ಕೊಡಬೇಕಾದ ಹಣವನ್ನು ಸಂಗ್ರಹಿಸಿರಿ. ದೇವಾಲಯನ್ನು ಸರಿಪಡಿಸಲು ಆ ಹಣವನ್ನು ಉಪಯೋಗಿಸಿರಿ. ಇದನ್ನು ಬೇಗನೆ ಮಾಡಿರಿ” ಎಂದು ಹೇಳಿದನು. ಆದರೆ ಲೇವಿಯರು ಅವಸರ ಮಾಡಲಿಲ್ಲ.


ಯೆಹೋಯಾದನು ಮತ್ತು ರಾಜನು ದೇವಾಲಯವನ್ನು ದುರಸ್ತಿ ಮಾಡುವವರ ಕೈಗೆ ಅದನ್ನು ಕೊಟ್ಟರು. ಅವರು ಮರದ ಕುಶಲಕರ್ಮಿಗಳನ್ನೂ ಬಡಗಿಗಳನ್ನೂ ದೇವಾಲಯವನ್ನು ಸರಿಪಡಿಸಲು ನೇಮಿಸಿದರು. ಅಲ್ಲದೆ ತಾಮ್ರಕಬ್ಬಿಣಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನೂ ಕೆಲಸಕ್ಕೆ ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು