Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:1 - ಪರಿಶುದ್ದ ಬೈಬಲ್‌

1 ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನು ಸರ್ವೇಶ್ವರನಿಗೆ ಜೆರುಸಲೇಮಿನಲ್ಲಿ ಪಾಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇವಿುನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು; ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:1
9 ತಿಳಿವುಗಳ ಹೋಲಿಕೆ  

ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಅವರು ಈ ತಿಂಗಳ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆ ಪಸ್ಕದ ಊಟವನ್ನು ಮಾಡಬೇಕು. ಅವರು ಇದನ್ನು ಪಸ್ಕಹಬ್ಬದ ಎಲ್ಲಾ ನಿಯಮಗಳ ಪ್ರಕಾರ ನೇಮಕವಾದ ಕಾಲದಲ್ಲಿ ಮಾಡಬೇಕು.”


ಮೊದಲನೇ ತಿಂಗಳ ಹದಿನಾಲ್ಕನೆಯ ದಿನದಂದು ಸೆರೆಯಿಂದ ಹಿಂತಿರುಗಿಬಂದಿದ್ದ ಯೆಹೂದ್ಯರು ಪಸ್ಕಹಬ್ಬವನ್ನು ಆಚರಿಸಿದರು.


“ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ನೀವು ಪಸ್ಕಹಬ್ಬ ಆಚರಿಸಬೇಕು. ಹುಳಿ ಇಲ್ಲದ ರೊಟ್ಟಿಯ ಹಬ್ಬವು ಈ ಸಮಯದಲ್ಲಿ ಪ್ರಾರಂಭವಾಗುವದು. ಆ ಹಬ್ಬವು ಏಳು ದಿವಸಗಳ ತನಕ ನಡೆಯುವದು.


ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.


ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು