2 ಪೂರ್ವಕಾಲ ವೃತ್ತಾಂತ 35:15 - ಪರಿಶುದ್ದ ಬೈಬಲ್15 ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರವಾಗಿ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್ ಹಾಗು ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದುದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |
ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.