2 ಪೂರ್ವಕಾಲ ವೃತ್ತಾಂತ 35:16 - ಪರಿಶುದ್ದ ಬೈಬಲ್16 ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವುದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವುದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿನವೇ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಪ್ರಕಾರ ಅರಸನಾದ ಯೋಷೀಯನ ಅಪ್ಪಣೆಯಂತೆ ಪಸ್ಕವನ್ನು ಆಚರಿಸುವದಕ್ಕೂ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನರ್ಪಿಸುವದಕ್ಕೂ ಯೆಹೋವನ ಸೇವೆಯ ಸಂಬಂಧವಾದದ್ದೆಲ್ಲವೂ ಆ ದಿವಸವೇ ಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು. ಅಧ್ಯಾಯವನ್ನು ನೋಡಿ |