Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:22 - ಪರಿಶುದ್ದ ಬೈಬಲ್‌

22 ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:22
16 ತಿಳಿವುಗಳ ಹೋಲಿಕೆ  

ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!


ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.


ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.


ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.


ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.


ಜೆರುಸಲೇಮಿನಲ್ಲಿ ಅತೀವ ಗೋಳಾಟದ ಮತ್ತು ದುಃಖದ ಕಾಲ ಬರುವದು. ಅದು ಮೆಗಿದ್ದೋ ತಗ್ಗಿನಲ್ಲಿ ಹದದ್ ರಿಮ್ಮೋನನು ಸತ್ತಾಗ ಜನರು ಗೋಳಾಡಿದ ಸಮಯದಂತೆ ಇರುವದು.


ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.


ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.


ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.


ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.


ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ.


ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.


ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.


ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.


“ಯೆಹೋಯಾಕೀಮನೇ, ನಿನ್ನ ಮನೆಯಲ್ಲಿ ದೇವದಾರಿನ ಮರವನ್ನು ಬಹಳವಾಗಿ ಇಟ್ಟುಕೊಳ್ಳುವದರಿಂದ ನೀನು ದೊಡ್ಡ ರಾಜನಾಗುವದಿಲ್ಲ. ನಿನ್ನ ತಂದೆಯಾದ ಯೋಷೀಯನು ಅನ್ನಪಾನೀಯಗಳಿಂದ ತೃಪ್ತಿಪಟ್ಟುಕೊಳ್ಳುತ್ತಿದ್ದನು. ಅವನು ನೀತಿ ಮತ್ತು ನ್ಯಾಯ ಸಮ್ಮತವಾದದ್ದನ್ನು ಮಾಡುತ್ತಿದ್ದನು. ಯೋಷೀಯನು ಹಾಗೆ ಮಾಡಿದ್ದರಿಂದ ಎಲ್ಲವೂ ಸರಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು