Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:6 - ಪರಿಶುದ್ದ ಬೈಬಲ್‌

6 ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಮಾಡಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:6
21 ತಿಳಿವುಗಳ ಹೋಲಿಕೆ  

ಈ ಲೇವಿಯರೆಲ್ಲಾ ಒಟ್ಟಾಗಿ ಸೇರಿ ತಮ್ಮ ಸಹೋದರರೊಂದಿಗೆ ದೇವಾಲಯದ ಪವಿತ್ರ ಸೇವೆಯನ್ನು ಆರಂಭಿಸಲು ಸಿದ್ಧರಾದರು; ಅರಸನ ಮೂಲಕವಾಗಿ ಬಂದ ದೇವರ ಆಜ್ಞೆಗೆ ವಿಧೇಯರಾದರು; ದೇವಾಲಯವನ್ನು ಶುದ್ಧೀಕರಿಸಲು ಪ್ರಾರಂಭಿಸಿದರು.


ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.


ಹಿಸ್ಸೋಪ್ ಗಿಡದ ಬರಲಿನಿಂದ ನನ್ನನ್ನು ತೊಳೆದು ಶುದ್ಧೀಕರಿಸು; ನಾನು ಹಿಮಕ್ಕಿಂತಲೂ ಬಿಳುಪಾಗುವ ತನಕ ನನ್ನನ್ನು ತೊಳೆ!


ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.


ಅದಕ್ಕೆ ಕಾರಣವೇನೆಂದರೆ, ನಿಯಮಿತ ದಿವಸದಲ್ಲಿ ಹಬ್ಬ ನಡೆಸಲು ಸಾಧ್ಯವಾಗಲಿಲ್ಲ. ಯಾಕೆಂದರೆ ಬೇಕಾದಷ್ಟು ಯಾಜಕರು ಆ ಪರಿಶುದ್ಧ ಸೇವೆಗಾಗಿ ತಮ್ಮನ್ನು ಸಿದ್ಧಪಡಿಸಿಕೊಂಡಿರಲಿಲ್ಲ. ಅಲ್ಲದೆ ಜೆರುಸಲೇಮಿನಲ್ಲಿಯೂ ಜನ ಸೇರಿ ಬರಲಿಲ್ಲ.


ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು


ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.


ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.


ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.


ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.


ಅಲ್ಲಿ ನೆರೆದುಬಂದಿದ್ದ ಯಾಜಕರೆಲ್ಲರೂ ಯಾವ ವರ್ಗವ್ಯತ್ಯಾಸವಿಲ್ಲದೆ ಆಚಾರಕ್ಕನುಸಾರವಾಗಿ ತಮ್ಮನ್ನು ಶುದ್ಧೀಕರಿಸಿಕೊಂಡರು. ಬಳಿಕ ಅವರು ಪವಿತ್ರ ಸ್ಥಳದಿಂದ ಹೊರಬಂದು ಒಟ್ಟಾಗಿ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು