Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:10 - ಪರಿಶುದ್ದ ಬೈಬಲ್‌

10 ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:10
24 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.


ನೆಬೂಕದ್ನೆಚ್ಚರನು ದೇವಾಲಯದಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡು ಹೋಗಿ ಬಾಬಿಲೋನಿನ ತನ್ನ ಅರಮನೆಯಲ್ಲಿ ಇಟ್ಟುಕೊಂಡನು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು.


“ದಂಗೆಕೋರರಿಗೆ ಇದನ್ನು ಹೇಳು: ಈ ಸಂಗತಿಗಳ ಅರ್ಥವು ನಿಮಗೆ ಗೊತ್ತಿಲ್ಲವೇ? ಅವರಿಗೆ ಹೇಳು: ಮೊದಲಿನ ಗರುಡ ಪಕ್ಷಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು. ಅವನು ಜೆರುಸಲೇಮಿಗೆ ಬಂದು ಅದರ ರಾಜನನ್ನೂ ಅದರ ಹಿರಿಯರನ್ನೂ ಬಂಧಿಸಿ, ಅವರನ್ನು ತನ್ನ ರಾಜ್ಯವಾದ ಬಾಬಿಲೋನಿಗೆ ಕೊಂಡೊಯ್ದನು.


ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)


ಯೆಹೋಯಾಚೀನನೇ, ನಾನು ನಿನಗೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು. ನೀನು ಹೆದರಿಕೊಂಡಿರುವುದು ಆ ಜನರಿಗೇ. ಆ ಜನರು ನಿನ್ನನ್ನು ಕೊಲ್ಲಬಯಸುತ್ತಾರೆ.


ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು.


ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.


ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಮೊರ್ದೆಕೈಯನ್ನು ಸೆರೆಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು.


ಬಾಬಿಲೋನಿನವರು ನಿನ್ನ ಗಂಡುಮಕ್ಕಳನ್ನು ತೆಗೆದುಕೊಂಡು ಹೋಗುವರು. ಅವರು ಬಾಬಿಲೋನಿನ ಅರಮನೆಗಳಲ್ಲಿ ಕಂಚುಕಿಯರಾಗಿ ಸೇವೆ ಮಾಡುವರು” ಎಂದು ಹೇಳಿದನು.


ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.


ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ.


ಎರಡು ವರ್ಷಗಳೊಳಗಾಗಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನ್ನು ಹಿಂದಕ್ಕೆ ತರುವೆನು. ನೆಬೂಕದ್ನೆಚ್ಚರನು ಆ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನ್ನು ಜೆರುಸಲೇಮಿಗೆ ತರುತ್ತೇನೆ.


“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.


ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು