2 ಪೂರ್ವಕಾಲ ವೃತ್ತಾಂತ 36:11 - ಪರಿಶುದ್ದ ಬೈಬಲ್11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಕಾಲ ರಾಜ್ಯಭಾರ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |
ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
ಆದ್ದರಿಂದ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ಯುದ್ಧಮಾಡಲು ತನ್ನ ಎಲ್ಲಾ ಸೇನೆಯೊಡನೆ ಬಂದನು. ನೆಬೂಕದ್ನೆಚ್ಚರನು ಜೆರುಸಲೇಮಿನ ಸುತ್ತಲೂ ಪಾಳೆಯ ಮಾಡಿಕೊಂಡು ಮಣ್ಣಿನ ದಿಬ್ಬವನ್ನು ನಿರ್ಮಿಸಿದನು. ಅವನು ನಗರದೊಳಕ್ಕೆ ಹೋಗುವ ಮತ್ತು ನಗರದಿಂದ ಬರುವ ಜನರನ್ನು ತಡೆಯಲು ಹೀಗೆ ಮಾಡಿದನು. ಇದು ನೆಬೂಕದ್ನೆಚ್ಚರನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಂದು ಸಂಭವಿಸಿತು.