2 ಪೂರ್ವಕಾಲ ವೃತ್ತಾಂತ 36:13 - ಪರಿಶುದ್ದ ಬೈಬಲ್13 ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಅಧ್ಯಾಯವನ್ನು ನೋಡಿ |
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
(ಗಿಬ್ಯೋನ್ಯರು ಇಸ್ರೇಲರಲ್ಲ, ಅವರು ಇನ್ನೂ ಜೀವಂತವಾಗಿ ಉಳಿದಿರುವ ಅಮೋರಿಯರ ಕುಟುಂಬದವರು. ಗಿಬ್ಯೋನ್ಯರನ್ನು ಹಿಂಸಿಸುವುದಿಲ್ಲವೆಂದು ಇಸ್ರೇಲರು ಪ್ರಮಾಣ ಮಾಡಿದ್ದರು. ಆದರೆ ಸೌಲನು ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ಹೆಚ್ಚಿನ ಅಭಿಮಾನವನ್ನಿಟ್ಟಿದ್ದನು. ಆದ್ದರಿಂದ ಅವನು ಗಿಬ್ಯೋನ್ಯರನ್ನು ಕೊಲ್ಲಲು ಪ್ರಯತ್ನಿಸಿದನು.) ರಾಜನಾದ ದಾವೀದನು ಗಿಬ್ಯೋನ್ಯರನ್ನು ಒಟ್ಟಾಗಿ ಕರೆದು ಅವರೊಂದಿಗೆ ಮಾತನಾಡಿದನು.
ಅರ್ತಷಸ್ತ ರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನೆಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಆ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.