2 ಪೂರ್ವಕಾಲ ವೃತ್ತಾಂತ 36:18 - ಪರಿಶುದ್ದ ಬೈಬಲ್18 ದೇವಾಲಯದೊಳಗಿದ್ದ ಎಲ್ಲಾ ವಸ್ತುಗಳನ್ನು ನೆಬೂಕದ್ನೆಚ್ಚರನು ಬಾಬಿಲೋನಿಗೆ ಸಾಗಿಸಿದನು. ದೇವಾಲಯದೊಳಗೂ ಅರಸನ ಬಳಿಯಲ್ಲಿಯೂ ಅಧಿಕಾರಿಗಳ ಬಳಿಯಲ್ಲಿಯೂ ಇದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ಬಾಬಿಲೋನಿಗೆ ಸಾಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು. ಅಧ್ಯಾಯವನ್ನು ನೋಡಿ |