2 ಪೂರ್ವಕಾಲ ವೃತ್ತಾಂತ 36:19 - ಪರಿಶುದ್ದ ಬೈಬಲ್19 ನೆಬೂಕದ್ನೆಚ್ಚರನು ಮತ್ತು ಅವನ ಸೈನಿಕರು ದೇವಾಲಯವನ್ನು ಸುಟ್ಟುಹಾಕಿದರು; ಜೆರುಸಲೇಮ್ ಪಟ್ಟಣದ ಪೌಳಿಗೋಡೆಯನ್ನು ಕೆಡವಿಹಾಕಿದರು; ಅರಸನ ಮತ್ತು ಅವನ ಪರಿವಾರದವರ ಮನೆಗಳನ್ನೆಲ್ಲಾ ಸುಟ್ಟುಹಾಕಿದರು. ಜೆರುಸಲೇಮಿನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚಿದರು ಮತ್ತು ಸುಟ್ಟುಹಾಕಿದರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 [ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.