Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:22 - ಪರಿಶುದ್ದ ಬೈಬಲ್‌

22 ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:22
24 ತಿಳಿವುಗಳ ಹೋಲಿಕೆ  

“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.


ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನ್ ಎಪ್ಪತ್ತು ವರ್ಷಗಳವರೆಗೆ ಬಲಿಷ್ಠವಾಗಿರುವುದು. ಅನಂತರ ನಾನು ಬಾಬಿಲೋನಿನಲ್ಲಿ ವಾಸಮಾಡುತ್ತಿರುವ ನಿಮ್ಮ ಬಳಿಗೆ ಬಂದು ನನ್ನ ವಾಗ್ದಾನದಂತೆ ನಿಮ್ಮನ್ನು ಜೆರುಸಲೇಮಿಗೆ ಮತ್ತೆ ಕರೆದುಕೊಂಡು ಬರುವೆನು.


ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”


ಹೀಗೆ ಯೆಹೋವನು ತನ್ನ ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿಸಿದ ಮಾತುಗಳನ್ನು ನೆರವೇರಿಸಿದನು. “ಈ ಸ್ಥಳವು ಎಪ್ಪತ್ತು ವರ್ಷಗಳ ತನಕ ಪಾಳುಬೀಳುವದು. ಜನರು ಆಚರಿಸದೆಹೋದ ಸಬ್ಬತ್ ಹಬ್ಬಗಳಿಗೆ ಅದು ಪರಿಹಾರವಾಗಿರುವುದು” ಎಂದು ಯೆರೆಮೀಯನು ಹೇಳಿದ್ದನು.


ಕೋರೆಷನು ಪಾರಸಿಯ ರಾಜನಾಗಿದ್ದನು. ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. (ದಾನಿಯೇಲನ ಇನ್ನೊಂದು ಹೆಸರು ಬೇಲ್ತೆಶಚ್ಚರ.) ಈ ಸಂಗತಿ ಸತ್ಯವಾದುದು; ಆದರೆ ತಿಳಿದುಕೊಳ್ಳಲು ಬಹಳ ಕಷ್ಟಕರವಾಗಿತ್ತು. ದಾನಿಯೇಲನು ಈ ಸಂಗತಿಯನ್ನು ತಿಳಿದುಕೊಂಡನು. ಒಂದು ದರ್ಶನದಲ್ಲಿ ಅದರ ಬಗ್ಗೆ ಅವನಿಗೆ ವಿವರಿಸಲಾಯಿತು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಪ್ರಧಾನರೂ ನಾಯಕರೂ ಜೆರುಸಲೇಮಿಗೆ ಹೊರಟರು. ದೇವಾಲಯವನ್ನು ಕಟ್ಟಲು ಅವರು ಹೊರಟಾಗ ದೇವರಿಂದ ಪ್ರೋತ್ಸಾಹಿಸಲ್ಪಟ್ಟ ಇತರ ಜನರೂ ಅವರೊಂದಿಗೆ ಜೆರುಸಲೇಮಿಗೆ ಹೊರಟರು.


ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು.


ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.


ಹೌದು, ಬಾಬಿಲೋನಿನ ಜನರು ಅನೇಕ ಜನಾಂಗಗಳ ಮತ್ತು ಅನೇಕ ಮಹಾರಾಜರ ಸೇವೆ ಮಾಡಬೇಕಾಗುವುದು. ಅವರು ಮಾಡಲಿರುವ ದುಷ್ಕೃತ್ಯಗಳಿಗೆಲ್ಲ ತಕ್ಕ ಶಿಕ್ಷೆಯನ್ನು ನಾನು ಅವರಿಗೆ ಕೊಡುವೆನು.”


ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.


ಯೆಹೂದ ಮತ್ತು ಜೆರುಸಲೇಮಿನಲ್ಲಿ ಲೇವಿಯರು ಜನರಿಗೆಲ್ಲಾ ತಮ್ಮ ತಮ್ಮ ತೆರಿಗೆ ಹಣವನ್ನು ತಂದು ದೇವರಿಗೆ ಸಮರ್ಪಿಸುವಂತೆ ಪ್ರಕಟಿಸಿದರು. ಇಸ್ರೇಲರು ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗ ದೇವರ ಸೇವಕನಾದ ಮೋಶೆಯು ಜನರಿಗೆ ಇದನ್ನು ಆಜ್ಞಾಪಿಸಿದ್ದನು.


ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.


ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.


ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.


ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.


ನನ್ನ ಒಡೆಯನೇ, ನನ್ನ ರಾಜನೇ, ನನ್ನ ಮಾತುಗಳನ್ನು ಆಲಿಸು! ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿರುವುದಾದರೆ ಆತನಿಗೆ ನೈವೇದ್ಯವನ್ನು ಅರ್ಪಿಸೋಣ. ಆದರೆ ನೀನು ನನ್ನ ಮೇಲೆ ಕೋಪಗೊಳ್ಳುವಂತೆ ಜನರು ಮಾಡಿದ್ದರೆ, ಅವರಿಗೆ ಯೆಹೋವನು ಕೇಡಾಗುವಂತೆ ಮಾಡಲಿ. ನನಗೆ ಯೆಹೋವನು ನೀಡಿದ ಭೂಮಿಯನ್ನು ನಾನು ಬಿಡುವಂತೆ ಜನರು ಬಲವಂತಪಡಿಸಿದರು. ‘ಹೋಗು, ಹೊರದೇಶೀಯರೊಂದಿಗೆ ನೆಲೆಸು. ಹೋಗು, ಇತರ ದೇವರುಗಳನ್ನು ಆರಾಧಿಸು’ ಎಂದು ಜನರು ನನಗೆ ಹೇಳಿದರು.


ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು