Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:23 - ಪರಿಶುದ್ದ ಬೈಬಲ್‌

23 ಪಾರಸಿ ರಾಜನಾದ ಕೋರೆಷನು ತಿಳಿಸುವದೇನೆಂದರೆ: ಪರಲೋಕದಲ್ಲಿರುವ ದೇವರಾದ ಯೆಹೋವನು ನನ್ನನ್ನು ಇಡೀ ಭೂಮಿಗೆ ಅರಸನನ್ನಾಗಿ ಮಾಡಿದ್ದಾನೆ. ಆತನು ಜೆರುಸಲೇಮಿನಲ್ಲಿರುವ ತನ್ನ ಆಲಯವನ್ನು ತಿರುಗಿ ಕಟ್ಟುವ ಜವಾಬ್ದಾರಿಕೆಯನ್ನು ನನಗೆ ಕೊಟ್ಟಿರುತ್ತಾನೆ. ಆದ್ದರಿಂದ ದೇವರ ಜನರೆಲ್ಲಾ ಜೆರುಸಲೇಮಿಗೆ ಹಿಂತಿರುಗಿ ಹೋಗಬಹುದು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 "ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ ತನಗೋಸ್ಕರ ಯೆಹೂದದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಹೋಗಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:23
22 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ಇದರ ಬಗ್ಗೆ ನಾವು ಏನು ಹೇಳೋಣ? ದೇವರು ನಮ್ಮೊಂದಿಗೆ ಇರುವಾಗ, ನಮ್ಮನ್ನು ಯಾರೂ ಸೋಲಿಸಲಾರರು.


ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.


ಭೂಮಿಯ ಜನರು ಬಹು ಮುಖ್ಯರಲ್ಲ. ದೇವರು ಪರಲೋಕ ಸಮೂಹದವರಿಗೂ ಭೂಲೋಕದ ನಿವಾಸಿಗಳಿಗೂ ತನ್ನ ಚಿತ್ತಾನುಸಾರ ಮಾಡುತ್ತಾನೆ. ಯಾರೂ ಆತನನ್ನು ತಡೆಯಲಾರರು! ಯಾರೂ ಆತನನ್ನು ಪ್ರಶ್ನಿಸಲಾರರು!


ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.


ಆತನು ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.


ಬೆಳ್ಳಿಬಂಗಾರಗಳಿಂದ ತಯಾರಿಸಬೇಕಾದ ಎಲ್ಲಾ ವಸ್ತುಗಳಿಗೆ ಬೇಕಾದ ಬೆಳ್ಳಿಬಂಗಾರಗಳನ್ನೂ ಇದರ ನಾಜೂಕು ಕೆಲಸ ಮಾಡುವ ಕುಶಲಕರ್ಮಿಗಳನ್ನೂ ಕೊಟ್ಟಿರುತ್ತೇನೆ. ಈಗ ನಿಮ್ಮಲ್ಲಿ ಎಷ್ಟು ಮಂದಿ ನಿಮ್ಮನ್ನೇ ಯೆಹೋವನಿಗಾಗಿ ಪ್ರತಿಷ್ಠಿಸಿಕೊಳ್ಳುವಿರಿ?” ಎಂದು ಹೇಳಿದನು.


ಬಂಗಾರದ ಕೆಲಸಗಾರರೂ ಬೆಳ್ಳಿ, ತಾಮ್ರ, ಕಬ್ಬಿಣದ ಕೆಲಸಗಾರರೂ ಲೆಕ್ಕವಿಲ್ಲದಷ್ಟು ಇದ್ದಾರೆ. ಈಗ ನೀನು ಕೆಲಸ ಪ್ರಾರಂಭಿಸು. ದೇವರು ನಿನ್ನ ಸಂಗಡವಿರಲಿ” ಎಂದು ಹೇಳಿದನು.


ಪಾರಸಿ ರಾಜನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಯೆಹೋವನು ಅವನಿಂದ ಒಂದು ವಿಶೇಷ ಪ್ರಕಟನೆಯನ್ನು ಹೊರಡಿಸಿದನು. ಯೆರೆಮೀಯನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಕೊರೇಷನು ತನ್ನ ಸಾಮ್ರಾಜ್ಯದ ಮೂಲೆಮೂಲೆಗಳಿಗೆ ಜನರನ್ನು ಕಳುಹಿಸಿ ಈ ಸಂದೇಶವನ್ನು ಕೊಟ್ಟನು:


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ಪರಲೋಕದ ದೇವರನ್ನು ಸ್ತುತಿಸಿರಿ! ಆತನ ಪ್ರೀತಿ ಶಾಶ್ವತವಾದದ್ದು.


ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.


ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ. ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ. ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಘನತೆಯನ್ನು ಪಡೆದನು.


“ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.”


ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು.


ಉಪರ್ಸಿನ್ ಎಂದರೆ: ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.


ಚೀಯೋನ್ ಕುಮಾರಿಯೇ, ಪ್ರಸವವೇದನೆಯಲ್ಲಿರುವ ಸ್ತ್ರೀಯಂತೆ ನೀನು ನೋವನ್ನು ಅನುಭವಿಸು. ನೀನು ಜೆರುಸಲೇಮ್ ಪಟ್ಟಣದಿಂದ ಹೊರಗೆ ಹೋಗಿ ಹೊಲದಲ್ಲಿ ವಾಸಿಸುವೆ. ನಾನು ಹೇಳುವುದೇನೆಂದರೆ, ನೀನು ಬಾಬಿಲೋನಿಗೆ ಹೋಗುವೆ, ಆದರೆ ಅಲ್ಲಿ ನೀನು ರಕ್ಷಿಸಲ್ಪಡುವೆ. ಯೆಹೋವನು ಅಲ್ಲಿಗೆ ಬಂದು ನಿನ್ನನ್ನು ರಕ್ಷಿಸುವನು. ನಿನ್ನ ವೈರಿಗಳಿಂದ ನಿನ್ನನ್ನು ಬಿಡುಗಡೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು