11 ಇದಲ್ಲದೆ ಹೂರಾಮನು ಹಂಡೆಗಳನ್ನೂ, ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾಮನು ದೇವಾಲಯಕ್ಕೋಸ್ಕರ ಅರಸನಾದ ಸೊಲೊಮೋನನ ಅಪ್ಪಣೆಯಂತೆ ದೇವಾಲಯ ಕಾರ್ಯಕ್ಕಾಗಿ ಮಾಡಿ ಮುಗಿಸಿದನು.
11 ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:
ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.
ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.