17 ರಾಜನಾದ ಸೊಲೊಮೋನನು ಈ ಉಪಕರಣಗಳನ್ನೆಲ್ಲಾ ಮೊದಲು ಜೋರ್ಡನ್ ತಗ್ಗಿನ ಸುಕ್ಕೋತ್ ಮತ್ತು ಚೆರೇದ ಸ್ಥಳಗಳಲ್ಲಿ ದೊರಕುವ ಆವೆಮಣ್ಣಿನಿಂದ ಆಕಾರಗಳನ್ನು ಸಿದ್ಧಪಡಿಸಿ ಅದಕ್ಕೆ ಎರಕಹೊಯಿಸಿದನು.
ಈ ವಸ್ತುಗಳನ್ನು ಮಾಡಲು ಉಪಯೋಗಿಸಿದ ಹಿತ್ತಾಳೆಯನ್ನು ಸೊಲೊಮೋನನು ತೂಕಹಾಕಲೇ ಇಲ್ಲ. ಯಾಕೆಂದರೆ ತೂಕ ಮಾಡಲಾಗದಷ್ಟು ವಸ್ತುಗಳು ಅಲ್ಲಿದ್ದವು. ಆದ್ದರಿಂದ ಹಿತ್ತಾಳೆಯ ಒಟ್ಟು ತೂಕವು ತಿಳಿಯಲೇ ಇಲ್ಲ. ಈ ವಸ್ತುಗಳನ್ನು ಸುಕ್ಕೋತ್ ಮತ್ತು ಚಾರೆತಾನ್‌ಗಳ ನಡುವೆ ಜೋರ್ಡನ್ ನದಿಯ ಹತ್ತಿರ ತಯಾರಿಸಲು ರಾಜನು ಆಜ್ಞಾಪಿಸಿದನು. ಅವರು ಹಿತ್ತಾಳೆಯನ್ನು ಕರಗಿಸಿ, ಅದನ್ನು ಮಣ್ಣಿನ ನೆಲದ ಅಚ್ಚುಗಳಲ್ಲಿ ಸುರಿದು ಈ ವಸ್ತುಗಳನ್ನು ಮಾಡಿದರು.