2 ಪೂರ್ವಕಾಲ ವೃತ್ತಾಂತ 4:19 - ಪರಿಶುದ್ದ ಬೈಬಲ್19 ಸೊಲೊಮೋನನು ದೇವಾಲಯದೊಳಗೆ ಉಪಯೋಗಿಸುವ ಉಪಕರಣಗಳನ್ನು ಮಾಡಿಸಿದನು. ಅವನು ಬಂಗಾರದ ಯಜ್ಞವೇದಿಕೆಯನ್ನು ಮಾಡಿಸಿದನು; ನೈವೇದ್ಯದ ರೊಟ್ಟಿಗಳನ್ನು ಇಡಲು ಮೇಜುಗಳನ್ನು ಮಾಡಿಸಿದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು, ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು, ಅಧ್ಯಾಯವನ್ನು ನೋಡಿ |
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.