Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:9 - ಪರಿಶುದ್ದ ಬೈಬಲ್‌

9 ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾಅಂಗಳವನ್ನೂ ಮಹಾಅಂಗಳಕ್ಕೆ ಬಾಗಿಲುಗಳನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಯಾಜಕರ ಪ್ರಾಕಾರವನ್ನೂ, ಮಹಾಪ್ರಾಕಾರವನ್ನೂ, ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಮಾಡಿಸಿದನು; ಅವುಗಳ ಬಾಗಿಲುಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮತ್ತೆ, ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಾಡಿಸಿ ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಇಟ್ಟನು. ಅವುಗಳ ಕದಗಳನ್ನು ಕಂಚಿನ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಹಾಪ್ರಾಕಾರಕ್ಕೆ ಬಾಗಲುಗಳನ್ನೂ ಮಾಡಿಸಿದನು; ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:9
6 ತಿಳಿವುಗಳ ಹೋಲಿಕೆ  

ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.


ಮನಸ್ಸೆಯು ಪರಲೋಕದ ನಕ್ಷತ್ರಗಳಿಗಾಗಿ ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು.


ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.


ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು.


“ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.


ಆಲಯದ ಒಳಭಾಗದ ಅಳತೆಯನ್ನು ಅವನು ತೆಗೆದುಕೊಂಡ ಬಳಿಕ ನನ್ನನ್ನು ಪೂರ್ವದ ದ್ವಾರದಿಂದ ಹೊರತಂದು ಆ ಜಾಗವನ್ನೆಲ್ಲಾ ಅಳೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು