2 ಪೂರ್ವಕಾಲ ವೃತ್ತಾಂತ 5:1 - ಪರಿಶುದ್ದ ಬೈಬಲ್1 ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗೆ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು, ಬಂಗಾರವನ್ನೂ, ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಮುಡುಪಾಗಿಟ್ಟ ಬೆಳ್ಳಿ ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು. ಅಧ್ಯಾಯವನ್ನು ನೋಡಿ |