10 ಒಡಂಬಡಿಕೆಯ ಪೆಟ್ಟಿಗೆಯೊಳಗೆ ಎರಡು ಕಲ್ಲಿನ ಹಲಗೆಗಳು ಮಾತ್ರ ಇದ್ದವು. ಹೋರೇಬ್ ಬೆಟ್ಟದಲ್ಲಿ ಮೋಶೆಯು ಈ ಕಲ್ಲಿನ ಹಲಗೆಗಳನ್ನು ಪೆಟ್ಟಿಗೆಯೊಳಗಿಟ್ಟನು. ಆ ಬೆಟ್ಟದಲ್ಲಿ ಯೆಹೋವನು ಈಜಿಪ್ಟಿನಿಂದ ಬಿಡುಗಡೆ ಹೊಂದಿದ ಇಸ್ರೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡನು.
10 ಮಂಜೂಷದಲ್ಲಿ ಎರಡು ಕಲ್ಲಿನ ಹಲಗೆಗಳ ಹೊರತಾಗಿ ಬೇರೇನೂ ಇರಲಿಲ್ಲ, ಐಗುಪ್ತ ದೇಶದಿಂದ ಬಂದ ಇಸ್ರಾಯೇಲರೊಡನೆ, ಹೋರೇಬ್ ಬೆಟ್ಟದ ಬಳಿಯಲ್ಲಿ ಯೆಹೋವನು ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.
10 ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್‍ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.
10 ಅದರಲ್ಲಿ ಎರಡು ಕಲ್ಲಿನ ಹಲಿಗೆಗಳು ಹೊರತಾಗಿ ಬೇರೇನೂ ಇರಲಿಲ್ಲ; ಯೆಹೋವನು ಐಗುಪ್ತದೇಶದಿಂದ ಬಂದ ಇಸ್ರಾಯೇಲ್ಯರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿಟ್ಟಿದ್ದನು.
10 ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.
ಇಸ್ರೇಲ್ ಜನಾಂಗದೊಂದಿಗೆ ಹೋರೇಬ್ ಬೆಟ್ಟದಲ್ಲಿ ಯೆಹೋವನು ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಅಲ್ಲದೆ ಇಸ್ರೇಲರು ಮೋವಾಬ್ ಪ್ರಾಂತ್ಯದಲ್ಲಿದ್ದಾಗ ಯೆಹೋವನು ಮೋಶೆಗೆ ಅವರೊಡನೆ ಇನ್ನೊಂದು ಒಡಂಬಡಿಕೆಯನ್ನು ಮಾಡಿಕೊಳ್ಳಲು ಹೇಳಿದನು. ಅದು ಯಾವುದೆಂದರೆ:
ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.
ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು.
ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.