Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:13 - ಪರಿಶುದ್ದ ಬೈಬಲ್‌

13 ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:13
32 ತಿಳಿವುಗಳ ಹೋಲಿಕೆ  

ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.


ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.


ಯೆಹೋವನು ಒಳ್ಳೆಯವನು! ಆತನ ಪ್ರೀತಿಯು ಶಾಶ್ವತವಾದದ್ದು, ಆತನ ನಂಬಿಗಸ್ತಿಕೆಯು ನಿರಂತರವಾದದ್ದು.


ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕೆಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, “ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.


ಹೀಗೆ ನೀವೆಲ್ಲರೂ ಒಂದೇ ಹೃದಯದಿಂದಲೂ ಒಂದೇ ಮನಸ್ಸಿನಿಂದಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.


ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.


ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು!


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು!


ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.


ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.


ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.


ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.


ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.


ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.


ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.


ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು, ನೀನು ಅವರನ್ನು ರಕ್ಷಿಸಿದೆ.


ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಮಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.


ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.


ತಾಳಗಳಿಂದ ಆತನನ್ನು ಸ್ತುತಿಸಿರಿ! ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು