Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:14 - ಪರಿಶುದ್ದ ಬೈಬಲ್‌

14 ಆಗ ಯಾಜಕರು ನಿಂತುಕೊಂಡು ಸೇವೆಯನ್ನು ಮಾಡಲಾಗಲಿಲ್ಲ. ಯಾಕೆಂದರೆ ದೇವರ ಮಹಿಮೆಯು ದೇವಾಲಯವನ್ನು ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:14
10 ತಿಳಿವುಗಳ ಹೋಲಿಕೆ  

ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.


ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ತಮ್ಮ ಕಾರ್ಯವನ್ನು ಮುಂದುವರಿಸಲಾಗಲಿಲ್ಲ.


ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.


ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.


ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.


ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.


ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.


ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು