Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:7 - ಪರಿಶುದ್ದ ಬೈಬಲ್‌

7 ಆಮೇಲೆ ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಅದಕ್ಕಾಗಿ ಮಾಡಿದ್ದ ಮಹಾಪರಿಶುದ್ಧ ಸ್ಥಳದ ಕೆರೂಬಿಗಳ ರೆಕ್ಕೆಗಳ ಕೆಳಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:7
13 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ವಿಶ್ರಾಂತಿಯ ಸ್ಥಳದಿಂದ ಎದ್ದೇಳು. ನಿನ್ನ ಶಕ್ತಿಪೂರ್ಣವಾದ ಪೆಟ್ಟಿಗೆಯೊಂದಿಗೆ ಎದ್ದೇಳು.


ಅಪ್ಪಟ ಬಂಗಾರದಿಂದ ದೀಪಸ್ತಂಭಗಳನ್ನೂ ದೀಪಗಳನ್ನೂ ಮಾಡಿಸಿದನು. ಈ ದೀಪಸ್ತಂಭಗಳು ಮಹಾಪವಿತ್ರ ಸ್ಥಳದ ಎದುರಿನಲ್ಲಿ ನೇಮಕವಾದ ರೀತಿಯಲ್ಲಿ ಉರಿಯಬೇಕು.


ಈಗ ನಿಮ್ಮ ಹೃದಯಗಳನ್ನೂ ಆತ್ಮಗಳನ್ನೂ ನಿಮ್ಮ ದೇವರಾದ ಯೆಹೋವನಿಗೆ ಕೊಡಿರಿ. ಆತನಿಗೆ ಪರಿಶುದ್ಧ ನಿವಾಸವನ್ನು ಆತನ ಹೆಸರಿಗಾಗಿ ಕಟ್ಟಿರಿ; ಒಡಂಬಡಿಕೆಯ ಪೆಟ್ಟಿಗೆಯನ್ನೂ ಇತರ ಪವಿತ್ರ ಸಾಮಾಗ್ರಿಗಳನ್ನೂ ಆತನ ಆಲಯಕ್ಕೆ ತನ್ನಿರಿ” ಎಂದು ಹೇಳಿದನು.


ಇಸ್ರೇಲಿನ ಹಿರಿಯರೆಲ್ಲರೂ ಒಟ್ಟಾಗಿ ಸೇರಿಬಂದಾಗ ಲೇವಿಯರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ತಂದರು.


ಸೊಲೊಮೋನನು ಮತ್ತು ಇಸ್ರೇಲರೆಲ್ಲರೂ ಆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಞ ಮಾಡಿದರು.


ಕೆರೂಬಿಗಳ ರೆಕ್ಕೆಗಳು ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಚಾಚಿಕೊಂಡಿದ್ದವು. ಕೆರೂಬಿಗಳು ಆ ಪೆಟ್ಟಿಗೆಯ ಮೇಲೆಯೂ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಉಪಯೋಗಿಸುತ್ತಿದ್ದ ಕಂಬಗಳ ಮೇಲೆಯೂ ನಿಂತುಕೊಂಡಿದ್ದವು.


ಇದಲ್ಲದೆ ನಿಬಂಧನ ಶಾಸನವಿರುವ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದೇವಾಲಯದೊಳಗೆ ಇಟ್ಟಿರುತ್ತೇನೆ” ಎಂದು ಹೇಳಿದನು.


ಆಮೇಲೆ ಆ ಪುರುಷನು ಕೋಣೆಯ ಉದ್ದವನ್ನು ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. “ಇದು ಮಹಾ ಪವಿತ್ರಸ್ಥಳ” ಎಂದು ಅವನು ನನಗೆ ತಿಳಿಸಿದನು.


ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು