2 ಪೂರ್ವಕಾಲ ವೃತ್ತಾಂತ 6:13 - ಪರಿಶುದ್ದ ಬೈಬಲ್13 ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ಐದು ಮೊಳ ಉದ್ದ, ಐದು ಮೊಳ ಅಗಲ, ಮೂರು ಮೊಳ ಎತ್ತರವಾಗಿರುವ ಒಂದು ತಾಮ್ರಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿಡಿಸಿದ್ದನು. ಅವನು ಇಸ್ರಾಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ, ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.