Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:17 - ಪರಿಶುದ್ದ ಬೈಬಲ್‌

17 ಇಸ್ರೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ಕೊಟ್ಟಿರುವ ನಿನ್ನ ವಾಗ್ದಾನವು ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಸ್ರಾಯೇಲ್ ದೇವರೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:17
10 ತಿಳಿವುಗಳ ಹೋಲಿಕೆ  

“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.


ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.


“ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ.


“ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.


“ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,


ಈ ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!


ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ಆ ದೇವದೂತನು, “ಹೌದು, ನಾನೇ” ಅಂದನು.


ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?


“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು