2 ಪೂರ್ವಕಾಲ ವೃತ್ತಾಂತ 6:20 - ಪರಿಶುದ್ದ ಬೈಬಲ್20 ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’” ಎಂದು ಹೇಳಿದವನೇ, ನಿನ್ನ ಕೃಪಾ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗಲೆಲ್ಲಾ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಈ ಸ್ಥಳವನ್ನು ಕುರಿತು - ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವದು ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿನ್ನ ಸೇವಕನು ಪ್ರಾರ್ಥಿಸುವಾಗೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
“ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು; ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.